ವಾಷಿಂಗ್ಟನ್: ಮುಂದಿನ ನಾಲ್ಕರಿಂದ ಆರು ತಿಂಗಳುಗಳಲ್ಲಿ ಕೊರೊನಾ ಬಾಧೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇಂತಹ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬಹುದು ಎಂದು ನಾನು ಭಾವಿಸಿದ್ದೆ. ಆದರೆ ಮುಂದಿನ ನಾಲ್ಕರಿಂದ ಆರು ತಿಂಗಳು ಕೊರೊನಾ ಸೋಂಕು ಇನ್ನಷ್ಟು ಹೆಚ್ಚಾಗಲಿದೆ. ನಾವು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದಿದ್ದಲಿ ಹೆಚ್ಚುವರಿಯಾಗಿ 2 ಲಕ್ಷಕ್ಕಿಂತ ಹೆಚ್ಚು ಜನರು ಸಾವಿಗೀಡಾಗಲಿದ್ದಾರೆ ಎಂದು ಇನ್ಸ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಮೆಟ್ರಿಕ್ಸ್ ಎವಲ್ಯೂಷನ್ (ಐಎಚ್‌ಎಂಇ) ಎಚ್ಚರಿಸಿದೆ. ನಿಯಮಗಳನ್ನು ಪಾಲಿಸುವ ಮೂಲಕ ಇದನ್ನು ತಪ್ಪಿಸಬಹುದು’ ಎಂದು ಅವರು ಹೇಳಿದರು.
ಬಿಲ್ ಗೇಟ್ಸ್ ಅವರ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್, ಕೋವಿಡ್ ಲಸಿಕೆ ತಯಾರಿಸುವ ಕಾರ್ಯದಲ್ಲಿ ತೊಡಗಿದೆ. ಕಳೆದ ಕೆಲವು ವಾರಗಳಲ್ಲಿ ಅಮೆರಿಕದಲ್ಲಿ ಸೋಂಕು ತೀವ್ರವಾಗಿದ್ದು ,ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೆ ಸಾವು ಸೇರಿದಂತೆ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ.
PublicNext
14/12/2020 01:25 pm