ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಕೋವಿಡ್ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ

ಹುಬ್ಬಳ್ಳಿ: ವಾಣಿಜ್ಯನಗರಿಯ ವಿಮಾನ ನಿಲ್ದಾಣದ ಕಾರ್ಗೊ ವಿಭಾಗದಲ್ಲಿ ಕೊರೊನಾ ಸೋಂಕಿಗೆ ಲಸಿಕೆ ಸಂಗ್ರಹ ಮಾಡಲು ‘ಕೋಲ್ಡ್‌ ಸ್ಟೋರೇಜ್‌’ ನಿರ್ಮಿಸಬೇಕಾಗಿದೆ. ಇದಕ್ಕಾಗಿ ₹5 ಲಕ್ಷ ಅನುದಾನ ಬಿಡುಗಡೆ ಮಾಡಬೇಕು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕರೆ ಅವರು, ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ.

ದೇಶದ ಎಲ್ಲ ವಿಮಾನ ನಿಲ್ದಾಣಗಳ ಸರಕು ಸಾಗಣೆ ವಿಭಾಗದಲ್ಲಿ ಲಸಿಕೆ ಸಂಗ್ರಹಿಸಿಡಬೇಕು. ಲಸಿಕೆ ಸಂಗ್ರಹಣೆಗೆ ಎಲ್ಲ ವಿಮಾನ ನಿಲ್ದಾಣಗಳ ನಿರ್ದೇಶಕರು ಯಾವುದೇ ಸಮಯದಲ್ಲೂ ಸಜ್ಜಾಗಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿನ ಕಾರ್ಗೊ ಸೌಲಭ್ಯದ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಆದ್ದರಿಂದ ‘ಕೋಲ್ಡ್‌ ಸ್ಟೋರೇಜ್‌’ ನಿರ್ಮಾಣಕ್ಕೆ ಅತಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಕೋರಿದ್ದಾರೆ.

ಸದ್ಯದರಲ್ಲೇ ಅನುದಾನ ಬಿಡುಗಡೆಯಾಗುವ ಸಾಧ್ಯತೆಯಿದೆ. 2ರಿಂದ 4 ಡಿಗ್ರಿ ಸೆಲ್ಸಿಯಸ್‌ನಲ್ಲಿ ಕೋವಿಡ್‌ ಲಸಿಕೆಯನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಮಾರ್ಚ್‌ ವೇಳೆಗೆ ಸ್ಟೋರೇಜ್‌ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಭರವಸೆಯಿದೆ’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಠಾಕರೆ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

18/12/2020 11:58 am

Cinque Terre

80.74 K

Cinque Terre

1

ಸಂಬಂಧಿತ ಸುದ್ದಿ