ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ತನ್ನ ಕಂಟ್ರೋಲ್ ಕಳೆದುಕೊಳ್ಳುತ್ತಿದೆ.
ರಾಜ್ಯದಲ್ಲಿಂದು 1,222 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,07,123 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ರಾಜ್ಯದಲ್ಲಿ ಇಂದು 8 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,989 ಕ್ಕೆ ಏರಿಕೆಯಾಗಿದೆ.
ಇನ್ನು ಇದುವರೆಗೆ 8,79,735 ಜನ ಸೋಂಕಿತರು ಗುಣಮುಖ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 15,380 ಜನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
PublicNext
18/12/2020 08:22 pm