ನವದೆಹಲಿ : ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿದ ಡೆಡ್ಲಿ ಸೋಂಕು ಕೊರೊನಾ ಮದ್ದು ರೆಡಿಯಾಗಿದೆ.
ದೇಶಲ್ಲಿ ಸೋಂಕಿನ ಹುಟ್ಟಡಗಿಸಲು ಆರೋಗ್ಯ ಇಲಾಖೆ ಅಸ್ತ್ರವೊಂದನ್ನಾ ತಯಾರಿಸಿದ್ದು ಜನೆವರಿಯಲ್ಲಿ ಜನಸಾಮಾನ್ಯರಿಗೆ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವೇ ಸರ್ಕಾರದ ಆದ್ಯತೆಯಾಗಿದೆ.
ಹೀಗಾಗಿ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಲಸಿಕೆಗಳನ್ನು ಸಂಬಂಧ ಪಟ್ಟ ಔಷಧೀಯ ಇಲಾಖೆ ವಿಶ್ಲೇಷಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಈವರೆಗೆ 1 ಕೋಟಿಗೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಇನ್ನೂ ಕನಿಷ್ಟ 1.45 ಲಕ್ಷ ಜನ ಮೃತಪಟ್ಟಿದ್ದಾರೆ ಎಂಬುದು ಉಲ್ಲೇಖಾರ್ಹ.
ಭಾರತವು ಯಾವುದೇ ದೇಶಕ್ಕಿಂತ ಕಡಿಮೆಯಿಲ್ಲ ನಮ್ಮ ಆದ್ಯತೆಯು ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವಾಗಿದೆ.
ಅದರ ಬಗ್ಗೆ ನಾವು ಯಾವುದೇ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ನಮ್ಮ ನಿಯಂತ್ರಕರು ಅವುಗಳನ್ನು ಗಂಭೀರತೆಯಿಂದ ವಿಶ್ಲೇಷಿಸುತ್ತಿದ್ದಾರೆ.
ದೇಶದ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಸ್ಥಳೀಯ ಲಸಿಕೆಗಾಗಿ ಕೆಲಸ ಮಾಡಿದ್ದಾರೆ ಮತ್ತು ಮುಂದಿನ ಆರರಿಂದ ಏಳು ತಿಂಗಳಲ್ಲಿ ಭಾರತವು ಸುಮಾರು 30 ಕೋಟಿ ಜನರಿಗೆ ಚುಚ್ಚುಮದ್ದನ್ನು ನೀಡುವ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ಭರವಸೆ ನೀಡಿದ್ದಾರೆ.
PublicNext
21/12/2020 08:33 am