ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಮ್ಮಾರಿ ಕೊರೊನಾ ಬೆನ್ನಲ್ಲೇ ಬಂತು ಶಿಗೆಲ್ಲಾ ಸೋಂಕು: ರೋಗ ಲಕ್ಷಣ, ತಡೆ ಹೇಗೆ? ಇಲ್ಲಿದೆ ಮಾಹಿತ

ಕೊಚ್ಚಿ: ವಿಶ್ವದ ಜನರನ್ನು ತಲ್ಲಣಗೊಳಿಸಿದ ಅಬ್ಬರ ಕೊಂಚ ಕಡಿಮೆಯಾಗಿದೆ. ಈ ಬೆನ್ನಲ್ಲೇ ಕೇರಳದಲ್ಲಿ ಶಿಗೆಲ್ಲಾ ಬ್ಯಾಕ್ಟಿರಿಯಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಶಿಗೆಲ್ಲಾ ಸೋಂಕಿನಿಂದ 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ 6 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 20 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕೋಳಿಕೋಡ್ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿ.ಜಯಶ್ರೀ ಅವರು, ಅತಿಸಾರ ಭೇದಿ, ಜ್ವರ ಹಾಗೂ ಹೊಟ್ಟೆನೋವು ಶಿಗೆಲ್ಲಾ ಲಕ್ಷಣಗಳಾಗಿದ್ದು, ಕೆಲವರಲ್ಲಿ ಸೋಂಕಿನ ಲಕ್ಷಣವೇ ಕಂಡುಬರುವುದಿಲ್ಲ. ಕಲುಷಿತ ಆಹಾರ ಹಾಗೂ ನೀರಿನಿಂದ ಈ ಸೋಂಕು ಹಬ್ಬುತ್ತದೆ. ಈಗಾಗಲೇ ಆರು ಜನರಲ್ಲಿ ಮಂದಿಯ ಮಲ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ರೋಗ ಲಕ್ಷಣ, ಚಿಕಿತ್ಸೆ ಏನು?:

ಅತಿಸಾರ ಭೇದಿ, ಜ್ವರ, ಹೊಟ್ಟೆನೋವು. ಕೆಲವರಲ್ಲಿ ಯಾವುದೇ ಲಕ್ಷಣ ಕಾಣದೆ ಇರಬಹುದು. ಮಲ ಪರೀಕ್ಷೆ ಮೂಲಕ ಸೋಂಕು ಪತ್ತೆ ಹಚ್ಚಿ ಬಳಿಕ ಆ್ಯಂಟಿ ಬಯೋಟಿಕ್ಸ್‌ ಬಳಸಿ ಚಿಕಿತ್ಸೆ ನೀಡಲಾಗುತ್ತದೆ.

ಹೇಗೆ ಹರಡುತ್ತೆ?: ಸೋಂಕಿತನ ವ್ಯಕ್ತಿ ಸಿದ್ಧಪಡಿಸಿದ ಆಹಾರ ಸೇವನೆ, ಬ್ಯಾಕ್ಟಿರಿಯಾ ಇರುವ ಪ್ರದೇಶವನ್ನು ಕೈಯಿಂದ ಮುಟ್ಟಿ ಬಾಯಿಗೆ ತಾಗಿಸಿದರೆ, ಸೋಂಕಿತರ ಜತೆ ಲೈಂಗಿಕ ಕ್ರಿಯೆ ನಡೆಸಿದರೆ ಹರಡುತ್ತೆ. ಕಲುಷಿತ ನೀರು, ಆಹಾರದಿಂದಲೂ ಬರುತ್ತೆ ಎಂದು ತಜ್ಞರು ತಿಳಿಸಿದ್ದಾರೆ.

ತಡೆಯೋದು ಹೇಗೆ?: ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಕೈ ತೊಳೆದುಕೊಳ್ಳಬೇಕು. ಲಕ್ಷಣ ಕಂಡ ಬಂದ ತಕ್ಷಣ ವೈದ್ಯರನ್ನು ಕಾಣಬೇಕು.

Edited By : Vijay Kumar
PublicNext

PublicNext

21/12/2020 12:06 pm

Cinque Terre

59.7 K

Cinque Terre

0