ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್‌ಗೆ ಕೊರೊನಾ ದೃಢ

ಬೆಂಗಳೂರು: ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಮಂಜುನಾಥ್ ಪ್ರಸಾದ್‌ ಅವರಿಗೆ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಹಾಗೂ ಆರೋಗ್ಯವಾಗಿದ್ದಾರೆ. ಸದ್ಯ ಹೋಂ ಕ್ವಾರಂಟೈನ್‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ.

ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಆಯುಕ್ತ ಮಂಜುನಾಥ್‌ ಅವರು, ತಮ್ಮೊಂದಿಗೆ ಸಭೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಿಬ್ಬಂದಿ ಮತ್ತು ಸಂಪರ್ಕದಲ್ಲಿದ್ದ ಸಾರ್ವಜನಿಕರು ಹೋಂಕ್ವಾರಂಟೈನ್‌ಗೆ ಒಳಗಾಗಲು ಮನವಿ ಮಾಡಿದ್ದಾರೆ.

Edited By : Vijay Kumar
PublicNext

PublicNext

22/12/2020 05:59 pm

Cinque Terre

40.91 K

Cinque Terre

0