ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೊರೊನಾ ರೂಪಾಂತರ ಹಾವಳಿಯ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಇಂದಿನಿಂದ ಜನವರಿ 2ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಇಂದು ನಡೆದ ಕೋವಿಡ್ ನಿಯಂತ್ರಣ ಕಾರ್ಯಪಡೆ ತಾಂತ್ರಿಕ ಮಂಡಳಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ವಿದೇಶದಿಂದ ಬರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿರಲೇಬೇಕು. ಇವರು ಹೊರಗೆ ಓಡಾಡುವಾಗ 72 ಗಂಟೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರಬೇಕಲ್ಲದೆ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.
PublicNext
23/12/2020 01:17 pm