ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ... 158 ಹೊಸ ಪ್ರಕರಣ ದೃಢ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಹೆಚ್ಚಾಗಿದೆ. ಇಂದು ಗುರುವಾರ ಹೊಸದಾಗಿ 158 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು ಆ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ ಏರಿಕೆಯಾಗಿದೆ.

ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದ್ದು, 24 ಗಂಟೆಗಳಲ್ಲಿ 8,350 ಪರೀಕ್ಷೆಗಳನ್ನು ನಡೆಸಲಾಗಿದೆ. ಶೇ 1.89ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 514 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 14 ಮಂದಿ ತೀವ್ರ ನಿಗಾ ಘಟಕ ಹಾಗೂ 40 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 69 ಮಂದಿ ಚೇತರಿಸಿಕೊಂಡಿದ್ದಾರೆ.

19 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2,492 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ 85 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 414ಕ್ಕೆ ಏರಿಕೆಯಾಗಿದೆ.

Edited By : Nirmala Aralikatti
PublicNext

PublicNext

28/12/2023 09:41 pm

Cinque Terre

43.99 K

Cinque Terre

1

ಸಂಬಂಧಿತ ಸುದ್ದಿ