ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು,ಕಳೆದ 24 ಗಂಟೆಯಲ್ಲಿ 1,531 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ನೀಡಿದ ಮಾಹಿತಿಯಂತೆ ಕೊರೊನಾ ಪಾಸಿಟಿವಿಟಿ ದರ 1.03% ನಷ್ಟಿದೆ.
ಇಂದು ರಾಜ್ಯಾದ್ಯಂತ 2,879 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಒಟ್ಟು 19 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಾದ್ಯಂತ 22,569 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 1,48,319 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
28/07/2021 06:46 pm