ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ನಿನ್ನೆಗಿಂತ ಕೊಂಚ ತಗ್ಗಿದೆ. ಕಳೆದ 24 ಗಂಟೆಯಲ್ಲಿ 2,052 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 35 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,01,247 ಜನರಿಗೆ ಸೋಂಕು ತಗುಲಿದ್ದು, 36,491 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,332 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,41,479 ಕ್ಕೆ ಏರಿಕೆಯಾಗಿದೆ. ಇನ್ನು 23,253 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೋವಿಡ್ ಸಾವಿನ ಪ್ರಮಾಣ 1.70% ನಷ್ಟಿದೆ. ಹಾಗೂ ಖಚಿತತೆಯ ಪ್ರಮಾಣ 1.37%ನಷ್ಟಿದೆ. ಹಾಗೂ ರಾಜ್ಯದಾದ್ಯಂತ 1,48,861 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಆತಂಕ ಮತ್ತೆ ಎದುರಾಗುವಂತೆ ಕಾಣುತ್ತಿದೆ. ಇಂದು 506 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,26,463 ಕ್ಕೆ ಏರಿಕೆಯಾಗಿದೆ. 257 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,02,194ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 9 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,852 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8,416 ಸಕ್ರಿಯ ಪ್ರಕರಣಗಳಿವೆ.
PublicNext
29/07/2021 07:16 pm