ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಸ್ಥಿರವಾಗಿದೆ. ಕಳೆದ 24 ಗಂಟೆಯಲ್ಲಿ 1,890 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 34 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,03,137 ಜನರಿಗೆ ಸೋಂಕು ತಗುಲಿದ್ದು 36,525 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,43,110 ಕ್ಕೆ ಏರಿಕೆಯಾಗಿದೆ. ಇನ್ನು 23,478 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಯಲ್ಲಿ ಕೊರೊನಾ ಖಚಿತತೆಯ ಪ್ರಮಾಣ 1.30% ನಷ್ಟಿದೆ. ಹಾಗೂ ಸಾವಿನ ಪ್ರಮಾಣ 1.79%ನಷ್ಟಿದೆ. ಇನ್ನು 14,5197 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಕಡಿಮೆಯಾಗಿದೆ. ನಗರದಲ್ಲಿ 426 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,26,889 ಕ್ಕೆ ಏರಿಕೆಯಾಗಿದೆ. 366 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,02,560ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 9 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,861 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 8,467 ಸಕ್ರಿಯ ಪ್ರಕರಣಗಳಿವೆ.
PublicNext
30/07/2021 06:48 pm