ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 41,649 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 593 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,23,810 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,08,920 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 24 ಗಂಟೆಯಲ್ಲಿ 37291 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,078,1,263 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ದೇಶದಲ್ಲಿ 17,76,315 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 52,99,036 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 46,15,18,479 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
PublicNext
31/07/2021 11:20 am