ಬೆಂಗಳೂರು : ಕೊರೊನಾ ಮೂರನೆ ಅಲೆ ಆತಂಕವು ಹೆಚ್ಚಿದೆ. ಇದರ ಮಧ್ಯೆ ಇಂದು 1987 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2905124 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 138532 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.43% ಕ್ಕೆ ಕುಸಿದಿದೆ.
ಇಂದು 37 ಜನ ಸೊಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1632 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2844742 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ 37 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36562 ಕ್ಕೆ ಏರಿಕೆಯಾಗಿದೆ. 23796 ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 138532 ಕೋವಿಡ್ ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.43% ಕ್ಕೆ ಇಳಿದಿದೆ.ಇನ್ನು ಮರಣ ಪ್ರಮಾಣ 1.86% ನಷ್ಟಿದೆ.
ರಾಜ್ಯ ರಾಜ್ಯಧಾನಿಯಲ್ಲಿ ತಗ್ಗಿಲ್ಲ ವೈರಸ್ ಅಬ್ಬರ
ಬೆಂಗಳೂರು: ರಾಜ್ಯರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್ ಗೆ ಬರುತ್ತಿದೆ. ಇಂದು 450 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1227339 ಕ್ಕೆ ಏರಿಕೆಯಾಗಿದೆ 377 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1202937 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 11 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15872 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8529 ಸಕ್ರಿಯ ಪ್ರಕರಣಗಳಿವೆ.
PublicNext
31/07/2021 07:28 pm