ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ನಿನ್ನೆ (ಶನಿವಾರ) 1,987 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು 1,875 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,55,048 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.20ಕ್ಕೆ ಕುಸಿದಿದೆ. ಇಂದು 1,502 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,46,244 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ 25 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 1.33% ನಷ್ಟಿದೆ. ರಾಜ್ಯದಲ್ಲಿ ಸದ್ಯ 24,144 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್ಗೆ ಬರುತ್ತಿದೆ. ಇಂದು 409 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,27,748ಕ್ಕೆ ಏರಿಕೆಯಾಗಿದೆ 377 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,03,314ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 8 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,880 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,553 ಸಕ್ರಿಯ ಪ್ರಕರಣಗಳಿವೆ.
PublicNext
01/08/2021 07:02 pm