ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್-19 ವೈರಸ್ ಮೂರನೇ ಅಲೆ ಆರಂಭವಾಗುವ ಕುರಿತು ಮುನ್ಸೂಚನೆಗಳು ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಮುಂದುವರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಮುಂದಾಗಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಕೇರಳ, ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಜನರಿಂದ ಸೋಂಕು ತಗುಲುವ ಸಾಧ್ಯತೆ ಇದೆ. ಮಾರಕ ಕೊರೊನಾ ಸೋಂಕು ನಿಯಂತ್ರಿಸಲು ಪಾಲಿಕೆ ಈಗಾಗಲೇ ಹಲವು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಿದೆ. ಎಲ್ಲಾ ಕೋವಿಡ್ ಸೋಂಕಿತರಿಗೂ ಕಡ್ಡಾಯವಾಗಿ ಫಿಜಿಕಲ್ ಟ್ರಯಾಜ್ ಸೆಂಟರ್ ಮೂಲಕ ಚಿಕಿತ್ಸೆ ನೀಡಬೇಕು. ಲ್ಯಾಬ್ ಮತ್ತು ಖಾಸಗಿ ಆಸ್ಪತ್ರೆಗಳು ಪಾಸಿಟಿವ್ ಪ್ರಕರಣಗಳ ವರದಿಯನ್ನು ಕಡ್ಡಾಯವಾಗಿ ಪಾಲಿಕೆಗೆ ತಿಳಿಸಬೇಕು ಎಂದು ಬಿಬಿಎಂಪಿ ಆದೇಶಿಸಿದೆ.
PublicNext
02/08/2021 03:24 pm