ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ತಗ್ಗಿದ ಕೊರೊನಾ ಆರ್ಭಟ: ಇಂದು 1,285 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಶನಿವಾರ 1,987 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಭಾನುವಾರ 1,875 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು 1,285 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಆತಂಕ ನಿಧಾನವಾಗಿ ಇಳಿಕೆಯಾಗುತ್ತಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,08,284ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,33,030 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 0.96ಕ್ಕೆ ಕುಸಿದಿದೆ. ಇಂದು 1,383 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,47,627 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಇಂದು ಡೆಡ್ಲಿ ಸೋಂಕಿಗೆ 25 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36,612ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 1.94% ನಷ್ಟಿದೆ. ರಾಜ್ಯದಲ್ಲಿ ಸದ್ಯ 24,021 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಬರುತ್ತಿದೆ. ಇಂದು 290 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,28,038ಕ್ಕೆ ಏರಿಕೆಯಾಗಿದೆ 168 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,03,482ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,885 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,670 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

02/08/2021 07:48 pm

Cinque Terre

75.24 K

Cinque Terre

0