ಬೆಂಗಳೂರು: ತಮಿಳು ನಾಡು ಹಾಗೂ ಕೇರಳದಿಂದ ಬೆಂಗಳೂರು ಗಡಿ ಪ್ರವೇಶಿಸುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲು ಬಿಬಿಎಂಪಿ ಸೂಚನೆ ನೀಡಿದೆ. ಹೀಗಾಗಿ ಸಿಟಿ ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ಖಾಸಗಿ ವಾಹನಗಳಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಬರೋರನ್ನ ತಪಾಸಣೆ ನಡೆಸಲಾಗ್ತಿದೆ. ಅಷ್ಟೇ ಅಲ್ಲ ಕೊರೊನಾ ನೆಗೆಟಿವ್ ರಿಪೋರ್ಟ್ ಇಲ್ದೆ ಇದ್ರೆ, ಸ್ಥಳದಲ್ಲೇ ಟೆಸ್ಟ್ ಮಾಡಿ, ಕೆಲ ದಿನಗಳ ಸೆಲ್ಫ್ ಕ್ವಾರಂಟೈನ್ನಲ್ಲಿರಬೇಕು ಎಂಬ ನಿಯಮ ರೂಪಿಸಲಾಗಿದೆ.
ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ಹೆಚ್ಚಿನ ನಿಗಾ ವಹಿಸಲು ಬಿಬಿಎಂಪಿ ತಂಡ ರಚನೆ ಮಾಡಿದ್ದು, ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ತಂಡದಿಂದ ತಪಾಸಣೆ ಕಾರ್ಯ ನಡೆಯುತ್ತಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮೈಸೂರು ಸ್ಯಾಟ್ ಲೈಟ್ ಬಸ್ ನಿಲ್ದಾಣ, ಯಶವಂತಪುರ, ಕೆಂಗೇರಿ ಸ್ಯಾಟ್ ಲೈಟ್, ಹಾಗೂ ಕೆ ಆರ್ ಪುರಂ ರೈಲ್ವೆ ನಿಲ್ದಾಣಗಳು ಸೇರಿದಂತೆ ಅನೇಕ ಕಡೆ ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಪಾಸಣೆ ಕಾರ್ಯ ನಡೆಸಲು ಬಿಬಿಎಂಪಿ ಸೂಚನೆ ನೀಡಿದೆ.
PublicNext
03/08/2021 07:22 am