ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 30,549 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,25,195ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,04,958 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38,887 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30896354 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ದೇಶದಲ್ಲಿ 16,49,295 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,09,587 ಜನರಿಗೆ ಲಸಿಕೆ ನೀಡಲಾಗಿದೆ.
PublicNext
03/08/2021 10:33 am