ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಮತ್ತೆ ಕೊರೊನಾ ಏರಿಕೆ ಕಂಡು ಬಂದಿದೆ. ನಿನ್ನೆ 1,285 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, ಇಂದು 1,674 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಬಿಜೆಪಿ ಮುಖಂಡ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದು 477 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.38ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 154 ಜನರು ಸೇರಿ ರಾಜ್ಯದಲ್ಲಿ 1,376 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ ಬೆಂಗಳೂರಿನ 7 ಜನ ಸೇರಿ ರಾಜ್ಯದ 38 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,280 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,21,021 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
PublicNext
03/08/2021 06:21 pm