ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಜುಲೈ 31ರಂದು 1,987 ಜನರಿಗೆ, ಆಗಷ್ಟ್ 1ರಂದು 1,875 ಹೊಸ ಮಂದಿಗೆ, ಹಾಗೂ ನಿನ್ನೆ (ಆಗಷ್ಟ್ 2)ರಂದು 1,285 ಜನರಿಗೆ ಸೋಂಕು ದೃಢಪಟ್ಟಿತ್ತು. ಇಳಿಕೆ ಹಂತದಲ್ಲಿದ್ದ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,674 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,09,958ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,21,021 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.38ಕ್ಕೆ ಕುಸಿದಿದೆ. ಇಂದು 1,376 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,49,003 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ 38 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36,650ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 2.27% ನಷ್ಟಿದೆ. ರಾಜ್ಯದಲ್ಲಿ ಸದ್ಯ 24,280 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಬರುತ್ತಿದೆ. ಇಂದು 477 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,28,515ಕ್ಕೆ ಏರಿಕೆಯಾಗಿದೆ 154 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,03,636ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಏಳು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,892 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,986 ಸಕ್ರಿಯ ಪ್ರಕರಣಗಳಿವೆ.
PublicNext
03/08/2021 06:47 pm