ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಖಚಿತತೆಯ ದರ ಹೆಚ್ಚುತ್ತಿದೆ ಅದರಲ್ಲೂ ಅಪಾರ್ಟ್ ಮೆಂಟ್ ಗಳಲ್ಲೇ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 8 ವಲಯದ 32 ಏರಿಯಾಗಳನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಲಾಗಿದೆ. ಒಂದೇ ದಿನ 5 ಅಪಾರ್ಟ್ ಮೆಂಟ್ ಗಳ ನಿವಾಸಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಪೂರ್ವ ಪೆವಿಲಿಯನ್ ಸೇರಿದಂತೆ ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.ಬೆಂಗಳೂರಿನ 8 ವಲಯಗಳ 32 ಏರಿಯಾಗಳನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಲಾಗಿದೆ.
ಬಸವನಗುಡಿ, ಪಶ್ಚಿಮ ವಲಯದ ಅರಮನೆ ನಗರ, ಬಸವೇಶ್ವರ ನಗರ, ಮಾರಪ್ಪನಪಾಳ್ಯ, ಯಲಹಂಕದ ಕುವೆಂಪು ನಗರ, ದೊಡ್ಡಬೊಮ್ಮಸಂದ್ರ, ದಾಸರಹಳ್ಳಿ ವಲಯದ ಅಬ್ಬಿಗೆರೆ, ನೆಲಮಹೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶ ಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ಮೂರನೇ ಅಲೆ ಭೀತಿ ಹೆಚ್ಚುತಿದ್ದು, ಕೋವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಂಟೈನ್ಮೆಂಟ್ ಝೋನ್ ಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ.
PublicNext
04/08/2021 08:18 am