ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ 1,769 ಮಂದಿಗೆ ಕೊರೊನಾ ದೃಢ- 30 ಜನ ಬಲಿ: ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ನಿನ್ನೆ (ಮಂಗಳವಾರ) 1,674 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, ಇಂದು 1,769 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 411 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.04ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 688 ಜನರು ಸೇರಿ ರಾಜ್ಯದಲ್ಲಿ 1,714 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬೆಂಗಳೂರಿನ ನಾಲ್ವರು ಸೇರಿ ರಾಜ್ಯದ 30 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,305 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,69,411 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

04/08/2021 06:29 pm

Cinque Terre

125.82 K

Cinque Terre

1