ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ನಿನ್ನೆ (ಮಂಗಳವಾರ) 1,674 ಜನರಿಗೆ ಸೋಂಕು ದೃಢಪಟ್ಟಿತ್ತು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,769 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,11,727ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,69,411 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.04ಕ್ಕೆ ಕುಸಿದಿದೆ. ಇಂದು 1,714 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,50,717 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡೆಡ್ಲಿ ಕೊರೊನಾಗೆ ನಿನ್ನೆ 38 ಜನ ಬಲಿಯಾಗಿದ್ದರೆ, ಇಂದು 30 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನಪ್ಪಿದವರ ಸಂಖ್ಯೆ 36,680ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 1.69% ನಷ್ಟಿದೆ. ರಾಜ್ಯದಲ್ಲಿ ಸದ್ಯ 24,305 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಬರುತ್ತಿದೆ. ಇಂದು 411 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,28,926ಕ್ಕೆ ಏರಿಕೆಯಾಗಿದೆ 688 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,04,324ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,896 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,705 ಸಕ್ರಿಯ ಪ್ರಕರಣಗಳಿವೆ.
PublicNext
04/08/2021 07:04 pm