ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ 1,785 ಮಂದಿಗೆ ಕೊರೊನಾ ದೃಢ- 25 ಜನ ಬಲಿ: ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ನಿನ್ನೆ (ಬುಧವಾರ) 1,769 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, ಇಂದು 1,785 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 414 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.10ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 554 ಜನರು ಸೇರಿ ರಾಜ್ಯದಲ್ಲಿ 1,651 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬೆಂಗಳೂರಿನ ಐವರು ಸೇರಿ ರಾಜ್ಯದ 25 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,414 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,61,662 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

05/08/2021 05:45 pm

Cinque Terre

42.83 K

Cinque Terre

0