ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳ; 1,785 ಮಂದಿಗೆ ಸೋಂಕು, 25 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇನ್ನು ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,785 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,61,662 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.10ಕ್ಕೆ ಕುಸಿದಿದೆ. ಇಂದು 1,651 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,52,368 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಡೆಡ್ಲಿ ಕೊರೊನಾಗೆ ಇಂದು 25 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನಪ್ಪಿದವರ ಸಂಖ್ಯೆ 36,705ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 1.40% ನಷ್ಟಿದೆ. ರಾಜ್ಯದಲ್ಲಿ ಸದ್ಯ 24,414 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಬರುತ್ತಿದೆ. ಇಂದು 414 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,29,340ಕ್ಕೆ ಏರಿಕೆಯಾಗಿದೆ 554 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,04,878ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,901 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,560 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

05/08/2021 07:05 pm

Cinque Terre

48.65 K

Cinque Terre

3