ಬೆಂಗಳೂರು : ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ.. ಸೇರಿದಂತೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಇಂದು ಬೆಂಗಳೂರಿನಲ್ಲಿ ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಾಗಲಿದೆ ಎಂದರು.
ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ, ಡಾ. ಕೆ. ಸುಧಾಕರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಜ್ಞ ವೈದ್ಯರಾದ ಡಾ.ಸಿ ಎನ್ ಮಂಜುನಾಥ, ಡಾ. ಸುದರ್ಶನ್, ಡಾ. ದೇವಿಪ್ರಸಾದ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
PublicNext
06/08/2021 02:38 pm