ಬೆಂಗಳೂರು : ರಾಜ್ಯದಲ್ಲಿಂದು 1805 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2915317 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 162338 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.11% ಕ್ಕೆ ಕುಸಿದಿದೆ.
ಇಂದು 36 ಜನ ಸೊಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1854 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2854222 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ 36 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36741 ಕ್ಕೆ ಏರಿಕೆಯಾಗಿದೆ. 24328 ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 162338 ಕೋವಿಡ್ ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.11% ಕ್ಕೆ ಇಳಿದಿದೆ.ಇನ್ನು ಮರಣ ಪ್ರಮಾಣ 1.99% ನಷ್ಟಿದೆ.
ಬೆಂಗಳೂರು: ರಾಜ್ಯರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್ ಗೆ ಬರುತ್ತಿದೆ. ಇಂದು 441 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1229781 ಕ್ಕೆ ಏರಿಕೆಯಾಗಿದೆ 434 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1205312 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 07 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15908 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8560 ಸಕ್ರಿಯ ಪ್ರಕರಣಗಳಿವೆ.
PublicNext
06/08/2021 07:05 pm