ಬೆಂಗಳೂರು: ಕೊರೊನಾ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇಂದಿನಿಂದ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್ ಲೈನ್ಸ್ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ.
ಇಂದಿನಿಂದ ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಆರಂಭ ಆಗಲಿದೆ. ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ. ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ವೇಳೆ ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ.
ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ವೀಕೆಂಡ್ ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ.
ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನ ಭಾಗಿಯಾಗಲು ಅವಕಾಶ ಕೊಡಲಾಗಿದೆ. ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ.
PublicNext
06/08/2021 08:28 pm