ನವದೆಹಲಿ: ಹೆಮ್ಮಾರಿ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,628 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 617 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,12,153ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 40,017 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,18,95,385ಕ್ಕೆ ಏರಿಕೆಯಾಗಿದೆ. ಶುಕ್ರವಾರ 4,14,159 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಶನಿವಾರ 4,27,371 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ವರದಿಯಾಗಿದೆ.
ಕಳೆದ 41 ದಿನಗಳಲ್ಲಿ 50,000ಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ವಾರದ ಪಾಸಿಟಿವಿಟಿ ದರ 2.39ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.2.21ರಷ್ಟಿದೆ ಎಂದು ವರದಿ ತಿಳಿಸಿದೆ.
PublicNext
07/08/2021 12:38 pm