ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ನಿನ್ನೆಗಿಂತ ಕೊಂಚ ತಗ್ಗಿದೆ. ಕಳೆದ 24 ಗಂಟೆಯಲ್ಲಿ 1,610 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 32 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,16,927 ಜನರಿಗೆ ಸೋಂಕು ತಗುಲಿದ್ದು, 36,773 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,640 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2855862 ಕ್ಕೆ ಏರಿಕೆಯಾಗಿದೆ. ಇನ್ನು 24,266 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ 1.08%ನಷ್ಟಿದೆ. ಹಾಗೂ ಕೋವಿಡ್ ಮರಣ ಪ್ರಮಾಣ 1.98%ನಷ್ಟಿದೆ. ಇನ್ನು ರಾಜ್ಯಾದ್ಯಂತ 1,47,869 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 357 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,30,138ಕ್ಕೆ ಏರಿಕೆಯಾಗಿದೆ. 400 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,05,712 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,913 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8,512 ಸಕ್ರಿಯ ಪ್ರಕರಣಗಳಿವೆ.
PublicNext
07/08/2021 07:09 pm