ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಮುಖವಾಗಿದ್ದು, ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,598 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,18,525ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,46,446 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.09ಕ್ಕೆ ಕುಸಿದಿದೆ. ಇಂದು 1,914 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,57,776 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡೆಡ್ಲಿ ಕೊರೊನಾಗೆ ಇಂದು 20 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನಪ್ಪಿದವರ ಸಂಖ್ಯೆ 36,793ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 1.25% ನಷ್ಟಿದೆ. ರಾಜ್ಯದಲ್ಲಿ ಸದ್ಯ 23,930 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಬರುತ್ತಿದೆ. ಇಂದು 348 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,30,486ಕ್ಕೆ ಏರಿಕೆಯಾಗಿದೆ 366 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,06,078ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,914 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,493 ಸಕ್ರಿಯ ಪ್ರಕರಣಗಳಿವೆ.
PublicNext
08/08/2021 06:29 pm