ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ನಿಧಾನವಾಗಿ ಇಳಿಕೆಯಾಗುತ್ತಿದೆ. ಇಂದು 1,186 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 296 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.89ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 410 ಜನರು ಸೇರಿ ರಾಜ್ಯದಲ್ಲಿ 1,776 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಬೆಂಗಳೂರಿನ ಒಬ್ಬರು ಸೇರಿ ರಾಜ್ಯದ 24 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 23,316 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,32,192 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
PublicNext
09/08/2021 05:22 pm