ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಜೊತೆಗೆ ಹೆಮ್ಮಾರಿಯಿಂದ ಸಾವನ್ನಪ್ಪುತ್ತಿರುವ ಸಂಖ್ಯೆಯೂ ಗಣನೀಯವಾಗಿ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,186 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,19,711ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 1,32,192 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ. 0.89ಕ್ಕೆ ಕುಸಿದಿದೆ. ಇಂದು 1,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಒಟ್ಟು 28,59,552 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡೆಡ್ಲಿ ಕೊರೊನಾಗೆ ಇಂದು 24 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನಪ್ಪಿದವರ ಸಂಖ್ಯೆ 36,817ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಮರಣ ಪ್ರಮಾಣ 2.02%ನಷ್ಟಿದೆ. ರಾಜ್ಯದಲ್ಲಿ ಸದ್ಯ 23,316 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್ಗೆ ಬರುತ್ತಿದೆ. ಇಂದು 296 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,30,782ಕ್ಕೆ ಏರಿಕೆಯಾಗಿದೆ 410 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,06,488ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,915 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 8,378 ಸಕ್ರಿಯ ಪ್ರಕರಣಗಳಿವೆ.
PublicNext
09/08/2021 06:57 pm