ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 28,204 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದು 5 ತಿಂಗಳಲ್ಲೇ ಅತಿ ಕಡಿಮೆ ಸಂಖ್ಯೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ ಒಟ್ಟು ಪ್ರಕರಣಗಳ ಸಂಖ್ಯೆ 3,19,98,158 ತಲುಪಿದೆ. 24 ಗಂಟೆ ಅವಧಿಯಲ್ಲಿ 373 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 4,28,682ಕ್ಕೆ ಏರಿಕೆಯಾಗಿದೆ. ಸದ್ಯ 3,88,508 ಸಕ್ರಿಯ ಪ್ರಕರಣಗಳಿವೆ. ಇದೂ ಕೂಡ 139 ದಿನಗಳಲ್ಲೇ ಅತಿ ಕಡಿಮೆಯಾಗಿದೆ.
ಕೊರೊನಾದಿಂದ ಚೇತರಿಸಿಕೊಂಡವರ ಪ್ರಮಾಣ ಈವರೆಗಿನ ಗರಿಷ್ಠ ಪ್ರಮಾಣ ತಲುಪಿದ್ದು, ಶೇ 97.45 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಒಟ್ಟು ಪ್ರಕರಣಗಳ ಶೇ 1.21ರಷ್ಟಿದೆ.
PublicNext
10/08/2021 12:02 pm