ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವುಏಣಿ ಆಟ ಮುಂದುವರೆದಿದೆ. ರಾಜ್ಯದಲ್ಲಿಂದು 1338 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗೆಯೇ 1947 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ವೇಳೆ ಹೆಮ್ಮಾರಿ ಸೋಂಕಿಗೆ 31 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ 22,676 ಸಕ್ರಿಯ ಪ್ರಕರಣಗಳು ಇವೆ.
ಪಾಸಿಟಿವಿಟಿ ದರ ಶೇಕಡ 1.05 ರಷ್ಟು ಇದೆ. ಇಂದು 1,26,400 ಪರೀಕ್ಷೆ ನಡೆಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 315 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 492 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದಾರೆ. 8,198 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
PublicNext
10/08/2021 06:15 pm