ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಮೂರನೇ ಅಲೆ ಭೀತಿ ಸಣ್ಣದಾಗಿ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 1,338 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 31ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,21,049 ಜನರಿಗೆ ಸೋಂಕು ತಗುಲಿದ್ದು, 36,848 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,61,499 ಕ್ಕೆ ಏರಿಕೆಯಾಗಿದೆ. ಇನ್ನು 22,676 ಸಕ್ರಿಯ ಪ್ರಕರಣಗಳಿವೆ. ಇದರೊಟ್ಟಿಗೆ ಕೊರೊನಾ ಖಚಿತತೆಯ ಒಟ್ಟು ಪ್ರಮಾಣ 1.05%ನಷ್ಟಿದೆ. ಹಾಗೂ ಮರಣ ಪ್ರಮಾಣ 2.31%ನಷ್ಟಿದೆ. ಮತ್ತು 1,26,400 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದೆ. ಇಂದು ನಗರದಲ್ಲಿ 315 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,31,097 ಕ್ಕೆ ಏರಿಕೆಯಾಗಿದೆ. 492 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,06,980ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 8,198 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,918 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 8,198ಸಕ್ರಿಯ ಪ್ರಕರಣಗಳಿವೆ.
PublicNext
10/08/2021 07:32 pm