ಬೆಂಗಳೂರು : ರಾಜ್ಯದಲ್ಲಿಂದು 1826 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2922875 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 167237 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 1.09% ಕ್ಕೆ ಕುಸಿದಿದೆ.
ಇಂದು 33 ಜನ ಸೊಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1618 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2863117 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ 33 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36881 ಕ್ಕೆ ಏರಿಕೆಯಾಗಿದೆ. 22851 ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 167237 ಕೋವಿಡ್ ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09% ಕ್ಕೆ ಇಳಿದಿದೆ. ಇನ್ನು ಮರಣ ಪ್ರಮಾಣ 1.80% ನಷ್ಟಿದೆ.
ಬೆಂಗಳೂರು: ರಾಜ್ಯರಾಜಧಾನಿಯಲ್ಲಿಂದು 377 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1231474 ಕ್ಕೆ ಏರಿಕೆಯಾಗಿದೆ 280 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1207260 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 05 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15923 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8290 ಸಕ್ರಿಯ ಪ್ರಕರಣಗಳಿವೆ.
PublicNext
11/08/2021 07:25 pm