ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಮೂರನೇ ಅಲೆಯ ಹರಡುವಿಕೆ ತನ್ನ ಮುನ್ಸೂಚನೆ ತೋರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 1,857 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು 30ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,24,732 ಜನರಿಗೆ ಸೋಂಕು ತಗುಲಿದ್ದು, 36,911 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,950 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,65,067 ಕ್ಕೆ ಏರಿಕೆಯಾಗಿದೆ. ಇನ್ನು 22,728 ಸಕ್ರಿಯ ಪ್ರಕರಣಗಳಿವೆ. ಹಾಗೂ ಕೋವಿಡ್ ಖಚಿತತೆಯ ಪ್ರಮಾಣ ಸದ್ಯ 1.15%ನಷ್ಟಿದೆ. ಹಾಗೂ ಮರಣ ಪ್ರಮಾಣ 1.61% ನಷ್ಟಿದೆ. ರಾಜ್ಯಾದಂತ ಳೆದ 24 ಗಂಟೆಯಲ್ಲಿ 1,61,275 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. 321 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,31,795ಕ್ಕೆ ಏರಿಕೆಯಾಗಿದೆ. 6,128ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 413ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,928 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8,193 ಸಕ್ರಿಯ ಪ್ರಕರಣಗಳಿವೆ.
PublicNext
12/08/2021 06:48 pm