ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಮೂರನೇ ಅಲೆ ಭೀತಿ ಕಾಡುತ್ತಿದೆ. ಕಳೆದ 24 ಗಂಟೆಯಲ್ಲಿ 1,669 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು 22 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,26,401 ಜನರಿಗೆ ಸೋಂಕು ತಗುಲಿದ್ದು 36,933 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,672 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,66,739ಕ್ಕೆ ಏರಿಕೆಯಾಗಿದೆ. ಇನ್ನು 22,703 ಸಕ್ರಿಯ ಪ್ರಕರಣಗಳಿವೆ. ಹಾಗೂ ರಾಜ್ಯದಲ್ಲಿ 0.98%ನಷ್ಟು ಕೋವಿಡ್ ಖಚಿತತೆಯ ಪ್ರಮಾಣ ಇದೆ. ಇನ್ನು ಮರಣ ಪ್ರಮಾಣ 1.31%ನಷ್ಟಿದೆ. 1,69,332 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದೆ. ಇಂದು 425 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,32,220ಕ್ಕೆ ಏರಿಕೆಯಾಗಿದೆ. 424 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,08,097 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,933 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8,189 ಸಕ್ರಿಯ ಪ್ರಕರಣಗಳಿವೆ.
PublicNext
13/08/2021 07:14 pm