ಬೆಂಗಳೂರು : ರಾಜ್ಯದಲ್ಲಿಂದು 1632 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2928033 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 155989 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 1.04% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 1612 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2868351 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 25 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36958 ಕ್ಕೆ ಏರಿಕೆಯಾಗಿದೆ. 22698 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.53%ನಷ್ಟಿದೆ.
ಬೆಂಗಳೂರು: ನಗರದಲ್ಲಿ 377 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1232597 ಕ್ಕೆ ಏರಿಕೆಯಾಗಿದೆ 365 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1208462 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಈವೆರಗೂ ಒಟ್ಟು 15934 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8200 ಸಕ್ರಿಯ ಪ್ರಕರಣಗಳಿವೆ.
PublicNext
14/08/2021 06:46 pm