ಚಿತ್ರದುರ್ಗ :ದೇಶ ಹಾಗೂ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಹರಡುವ ಮುನ್ಸೂಚನೆ ಇರುವುದರಿಂದ ಇದನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ಸಿದ್ಧತೆಗೊಂಡಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು. ಚಿತ್ರದುರ್ಗದ ಪೊಲೀಸ್ ಕವಾಯಿತು ಮೈದಾನದಲ್ಲಿ 75 ನೇ ಭಾರತೀಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಮೊದಲ ಹಾಗೂ ಎರಡನೇ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಕೆಲಸವನ್ನು ಮಾಡಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು, ಜನಪ್ರತಿನಿಧಿಗಳು ಸೇರಿಕೊಂಡು ಮೊದಲ ಹಾಗೂ ಎರಡನೇ ಅಲೆಯಲ್ಲಿ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಂಡಿದೆ ಎಂದು ತಿಳಿಸಿದರು. ಒಂದು ಕಡೆ ಕೋವಿಡ್ ಮೂರನೇ ಅಲೆಯ ಸಂಭವವಿದೆ. ಮತ್ತೊಂದು ಕಡೆಯಲ್ಲಿ ಬರಗಾಲ, ಅತಿವೃಷ್ಠಿ-ಅನಾವೃಷ್ಠಿಯನ್ನು ಸರ್ಕಾರ ಸಮರ್ಪಕವಾಗಿ ಎದುರಿಸಿದೆ ಎಂದು ಸಚಿವರು ತಿಳಿಸಿದರು.
PublicNext
15/08/2021 11:18 am