ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಆತಂಕ ಭೀತಿ ಹೆಚ್ಚಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ 35 ಜನರಲ್ಲಿ ಕೊರೊನಾ ಸೋಂಕು ತಗುಲಿವುದು ಖಾತ್ರಿಯಾಗಿದೆ. ಈ ಮೂಲಕ ಮೂರನೇ ಅಲೆಯ ಮುನ್ಸೂಚನೆ ಅನುಮಾನ ಮೂಡಿಸಿದೆ.
ಕಳೆದ ವಾರ ಗ್ರಾಮದಲ್ಲಿನ ಓರ್ವ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಅಂತ್ಯ ಸಂಸ್ಕಾರದ ಬಳಿಕ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂತ್ಯ ಸಂಸ್ಕಾರದ ಸಮಯದಲ್ಲೇ ಕೊರೊನಾ ಹರಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ ತಿಮ್ಮನಕೊಪ್ಪಲು ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದು, ಗ್ರಾಮದಲ್ಲಿರುವ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಲು ಜಿಲ್ಲಾಡಳಿತ ಆರೋಗ್ಯ ಇಲಾಖೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ ಎಂದು ಮಾಹಿತಿ ಲಭ್ಯವಾಗಿದೆ.
PublicNext
15/08/2021 02:42 pm