ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 1431 ಜನರಲ್ಲಿ ಕೋವಿಡ್ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 1431 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2929464 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 152767 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.93%ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 1611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2869962 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 21 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 36979 ಕ್ಕೆ ಏರಿಕೆಯಾಗಿದೆ. 22497 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.46% ನಷ್ಟಿದೆ.

ಬೆಂಗಳೂರು: ನಗರದಲ್ಲಿ 305 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1232902 ಕ್ಕೆ ಏರಿಕೆಯಾಗಿದೆ 366 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1208798 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು ಈವೆರಗೂ ಒಟ್ಟು 15937 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8166 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

15/08/2021 06:50 pm

Cinque Terre

69.39 K

Cinque Terre

0

ಸಂಬಂಧಿತ ಸುದ್ದಿ