ಬೆಂಗಳೂರು : ರಾಜ್ಯದಲ್ಲಿಂದು 1065 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2930529 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 113580 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.93% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 1486 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2871448 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 28 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 37007 ಕ್ಕೆ ಏರಿಕೆಯಾಗಿದೆ. 22048 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.62% ನಷ್ಟಿದೆ.
ಬೆಂಗಳೂರು: ನಗರದಲ್ಲಿ 270 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1233172 ಕ್ಕೆ ಏರಿಕೆಯಾಗಿದೆ 378 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1209176 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 4 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 15941 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8054 ಸಕ್ರಿಯ ಪ್ರಕರಣಗಳಿವೆ.
PublicNext
16/08/2021 06:48 pm