ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ 1,298 ಮಂದಿಗೆ ಕೊರೊನಾ ದೃಢ- 32 ಜನ ಬಲಿ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದು 1,298 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 340 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.01ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 471 ಜನರು ಸೇರಿ ರಾಜ್ಯದಲ್ಲಿ 1,833 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬೆಂಗಳೂರಿನ 10 ಮಂದಿ ಸೇರಿ ರಾಜ್ಯದ 32 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 21,481 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,28,269 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

17/08/2021 07:01 pm

Cinque Terre

84.07 K

Cinque Terre

0