ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತ ಕಾಣುತ್ತಿದೆ. ನಿನ್ನೆ (ಸೋಮವಾರ) 1,065 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದರೆ, ಇಂದು 1,298 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 29,31,827 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 1.01ಕ್ಕೆ ಕುಸಿದಿದೆ. ಇಂದು 1,28,269 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,833 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,73,281 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 32 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,039 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 21,481 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.46%ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 340 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,33,512 ಕ್ಕೆ ಏರಿಕೆಯಾಗಿದೆ 471 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,09,647ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 10 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,951 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,913 ಸಕ್ರಿಯ ಪ್ರಕರಣಗಳಿವೆ.
PublicNext
17/08/2021 07:23 pm