ಪಣಜಿ : ನೆರೆಯ ರಾಜ್ಯ ಗೋವಾದಲ್ಲಿ ಮೂರನೇಯ ಅಲೆಯು ಸಪ್ಟೆಂಬರ್-ಅಕ್ಟೋಬರ್ ನಲ್ಲಿ ಬರುವ ಸಾಧ್ಯತೆ ಹೆಚ್ಚಿದೆ ಎಂದು ಆರೋಗ್ಯ ಇಲಾಖೆ ಭೀತಿ ವ್ಯಕ್ತಪಡಿಸಿದೆ. ಈ ಮೂರನೇಯ ಅಲೆಯು ಪ್ರಮುಖವಾಗಿ ಮಕ್ಕಳಿಗೆ ತಗುಲುವ ಸಾಧ್ಯತೆಯಿದ್ದು, ಇದರಿಂದಾಗಿ ಮಕ್ಕಳಲ್ಲಿ ಕೋವಿಡ್ ನ ಸೌಮ್ಯ, ಮಧ್ಯಮ ಮತ್ತು ತೀವ್ರ ಸ್ವರೂಪದ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದೆ.
ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಗೋವಾ ರಾಜ್ಯ ಕೂಡ ಆತಂಕ ಪಡುವ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಮೂರನೇಯ ಅಲೆಯ ಹರಡುವ ಭೀತಿಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಕುರಿತ ವೀಡಿಯೊವನ್ನು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದೆ.
PublicNext
18/08/2021 02:15 pm