ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ 1,365 ಮಂದಿಗೆ ಕೊರೊನಾ ದೃಢ- 22 ಜನ ಬಲಿ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದು 1,365 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ.ಸುಧಾಕರ್, "ಬೆಂಗಳೂರಿನಲ್ಲಿ ಇಂದು 327 ಜನರಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.76ಕ್ಕೆ ಕುಸಿದಿದೆ. ಇಂದು ಬೆಂಗಳೂರಿನ 318 ಜನರು ಸೇರಿ ರಾಜ್ಯದಲ್ಲಿ 1,558 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬೆಂಗಳೂರಿನ ಇಬ್ಬರು ಸೇರಿ ರಾಜ್ಯದ 22 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 21,266 ಸಕ್ರಿಯ ಪ್ರಕರಣಗಳಿವೆ ಹಾಗೂ ಇಂದು 1,79,016 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

18/08/2021 06:34 pm

Cinque Terre

34.73 K

Cinque Terre

0