ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಮತ್ತೆ ಏರಿಕೆ ಕಾಣುತ್ತಿದೆ. ಸೋಮವಾರ 1,065 ಹಾಗೂ ನಿನ್ನೆ (ಮಂಗಳವಾರ) 1,298 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದರೆ, ಇಂದು 1,365 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 29,33,192 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.76ಕ್ಕೆ ಕುಸಿದಿದೆ. ಇಂದು 1,79,016 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,558 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,74,839 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 22 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,061ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 21,266 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.61%ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 327 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,33,839ಕ್ಕೆ ಏರಿಕೆಯಾಗಿದೆ 318 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,09,965ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,953 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,920 ಸಕ್ರಿಯ ಪ್ರಕರಣಗಳಿವೆ.
PublicNext
18/08/2021 07:00 pm