ಬೆಂಗಳೂರು : ರಾಜ್ಯದಲ್ಲಿಂದು 1453 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2936077 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 17300 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ ಶೇ 0.83% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 1408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2877785 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 17 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 37105 ಕ್ಕೆ ಏರಿಕೆಯಾಗಿದೆ. 21161 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.16% ನಷ್ಟಿದೆ.
ಬೆಂಗಳೂರು: ನಗರದಲ್ಲಿ 352 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1234509 ಕ್ಕೆ ಏರಿಕೆಯಾಗಿದೆ 381 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1210640 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಂದು ಒಂದು ಸಾವಾಗಿದೆ. ಈವೆರಗೂ ಒಟ್ಟು 15956 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7912 ಸಕ್ರಿಯ ಪ್ರಕರಣಗಳಿವೆ.
PublicNext
20/08/2021 06:55 pm